ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮೂವರು ಸಜೀವ ದಹನವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಕುಂಬಳಗೋಡು ಬಳಿ ರಾಮಸಂದ್ರದಲ್ಲಿ ಘಟನೆ ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಇಡೀ ಕಾರ್ಖಾನೆ ಧಗ ಧಗನೆ ಹೊತ್ತಿ ಉರಿದು ಹೋಗಿದೆ. ಮೂವರು ಪ್ರಾಣ ಕಳಕೊಂಡಿದ್ದಾರೆ ಎನ್ನಲಾಗಿದೆ.
ಸುಗಂಧ ದ್ರವ್ಯ ತಯಾರಿಸಲು ಬಳಸುವ ರಾಸಾಯನಿಕವನ್ನು ಡಬ್ಬಿಗಳಲ್ಲಿ ತುಂಬಿಡಲಾಗಿತ್ತು. ರಾಸಾಯನಿಕ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ.
ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.