ಬೆಂಗಳೂರು | ಹೊತ್ತಿ ಉರಿದ ಪಟಾಕಿ ಅಂಗಡಿ: 12 ಜನರು ಸಜೀವದಹನ

Prasthutha|

- Advertisement -

ಆನೇಕಲ್: ಲಾರಿಯಲ್ಲಿ ಪಟಾಕಿ ಅನ್​ ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, 12 ಜನರು ಸಜೀವದಹನವಾಗಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ನಡೆದಿದೆ.

ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ದೊಡ್ಡ ಮಳಿಗೆಯಾಗಿದ್ದರಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

- Advertisement -

ಅಗ್ನಿ ದುರಂತದಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿ ಅಗ್ನಿಗಾಹುತಿಯಾಗುವುದರೊಂದಿಗೆ 1 ಕ್ಯಾಂಟ್ರೋ, 2 ಬೊಲೆರೋ, 4 ಬೈಕ್​ಗಳು ಸಹ ಬೆಂಕಿಗಾಹುತಿ ಆಗಿವೆ.