ಒಡಿಶಾ ರೈಲು ದುರಂತದಲ್ಲಿ ಬೆಂಗಳೂರಿನ ಹೋಟೆಲ್ ಕಾರ್ಮಿಕ ಸಾವು

Prasthutha|

ಬೆಂಗಳೂರು: ಒಡಿಶಾದಲ್ಲಿ ನಡೆದ ರೈಲು ದುರಂತದಲ್ಲಿ ಬೆಂಗಳೂರಿನ ಹೋಟೆಲ್​ವೊಂದರ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

ಅಪಘಾತದಲ್ಲಿ ಹೌರಾ ಎಕ್ಸ್‌ಪ್ರೆಸ್‌ನಲ್ಲಿದ್ದ ಕನಿಷ್ಠ 36 ಪ್ರಯಾಣಿಕರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ಇವರೆಲ್ಲರಿಗೂ ಪರಿಹಾರವನ್ನು ನೀಡಲಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯ ಪತ್ನಿಗೆ ಎರಡು ಲಕ್ಷ ರೂ. ಹಾಗೂ ಇತರರಿಗೆ ತಲಾ 50,000 ರೂ. ಪರಿಹಾರ ನೀಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಿವಾಸಿ ಸಾಗರ್ ಖೇರಿಯಾ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 30 ವರ್ಷದ ಖೇರಿಯಾ ಅವರು ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಮನೆಗೆ ಹಿಂದಿರುಗುತ್ತಿದ್ದಾಗ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಅವರು ಜಲ್ಪೈಗುರಿ ಜಿಲ್ಲೆಯ ನಗರಕಟಾ ಬ್ಲಾಕ್‌ನ ಇತರ 13 ಜನರೊಂದಿಗೆ ಪ್ರಯಾಣಿಸಿದ್ದರು ಎನ್ನಲಾಗಿದೆ.

- Advertisement -

ಸಾಗರ್ ಖೇರಿಯಾ ಜೊತೆ ಇದ್ದ ಧರ್ಮನಾಥ್ ಸಿಂಗ್ (19) ಮತ್ತು ಅಮನ್ ಒನ್ರಾವ್ (24) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Whatsapp