Home ಟಾಪ್ ಸುದ್ದಿಗಳು ಬೆಂಗಳೂರು: ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂದು ವರ್ಣರಂಜಿತ ತೆರೆ

ಬೆಂಗಳೂರು: ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂದು ವರ್ಣರಂಜಿತ ತೆರೆ

ಬೆಂಗಳೂರು: ಸುಮಾರು ಒಂದು ವಾರಗಳ ಕಾಲ ನಡೆದ 13 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂದು ತೆರೆ ಬೀಳಲಿದೆ. ಏಳು ದಿನಗಳ ಕಾಲ ಬೆಂಗಳೂರಿನ ಒರಾಯನ್ ಮಾಲ್, ಕನ್ನಡ ಚಲನಚಿತ್ರ ಕಲಾವಿದರ ಸಂಘ ಮತ್ತು ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಚಿತ್ರ ಪ್ರದರ್ಶನಗಳು ನಡೆದವು.

ಇಂದು ಸಂಜೆ 5.45ಕ್ಕೆ ಚಿತ್ರೋತ್ಸವಕ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸುವ ಮೂಲಕ ಅಂತಿಮ ತೆರೆ ಬೀಳಲಿದೆ. ಈ ಕಾರ್ಯಕ್ರಮವು ಬೆಂಗಳೂರಿನ ಜೆ.ಎನ್.ಟಾಟಾ ಆಡಿಟೋರಿಯಂನಲ್ಲಿ ನಡೆಯಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅಥಿಗಳಾಗಿ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ್, ಲೋಕಸಭಾ ಸದಸ್ಯರಾದ ಡಿ.ವಿ.ಸದಾನಂದ ಗೌಡ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಕರ್ನಾಟಕ ಚಲನಚಿತ್ರ ಅಕಾಡಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್. ಜೈರಾಜ್ ಭಾಗಿಯಾಗಲಿದ್ದಾರೆ

ಈ ಸಂದರ್ಭದಲ್ಲಿ ಚಿತ್ರೋತ್ಸವದಲ್ಲಿ ಭಾಗಿಯಾಗಿ, ನಾನಾ ವಿಭಾಗಗಳಲ್ಲಿ ಪ್ರಶಸ್ತಿ ಪಡೆದ ಚಿತ್ರಗಳಿಗೆ ಪ್ರಶಸ್ತಿ, ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಸಮಾರಂಭಕ್ಕೂ ಮುನ್ನ ಸುಮ ಸುಧೀಂದ್ರ ಮತ್ತು ತಂಡದವರಿಂದ ವೀಣಾ ಫ್ಯೂಜನ್ ಸಂಗೀತ ಕಾರ್ಯಕ್ರಮ ಆಯೋಜನೆ ಮಾಡಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version