ಬೆಂಗಳೂರು; ಬೈಕ್ ಮೇಲೆ ಲಾರಿ ಮಗುಚಿ ಬಿದ್ದು ಹಿರಿಯ ಪತ್ರಕರ್ತ ಸಾವು

Prasthutha: January 23, 2022

ಬೆಂಗಳೂರು; ವೇಗವಾಗಿ ಬಂದ ಲಾರಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೈಕ್ ಮೇಲೆ ಬಿದ್ದು ಹಿರಿಯ ಪತ್ರಕರ್ತ ಶೃಂಷ
ಗಂಗಾಧರ ಮೂರ್ತಿ ಮೃತಪಟ್ಟಿರುವ ದುರ್ಘಟನೆ ಜೆಸಿ ರಸ್ತೆಯ ಟೌನ್ ಹಾಲ್ ಮುಂಭಾಗದಲ್ಲಿ ಇಂದು ಸಂಜೆ ನಡೆದಿದೆ.
ವಿಜಯವಾಣಿ ಪತ್ರಿಕೆಯ ಸಹ ಸಂಪಾದಕರಾಗಿ ಕೆಲಸ ಮಾಡುತ್ತಿದ್ದ ಶೃಂಷ
ಗಂಗಾಧರ ಮೂರ್ತಿ ಅವರು ಬೈಕ್ ನಲ್ಲಿ ಟೌನ್ ಹಾಲ್ ಮುಂಭಾಗದಲ್ಲಿ ಹೋಗುತ್ತಿದ್ದಾಗ ಜೆಸಿ ನಗರ ರಸ್ತೆ ಕಡೆಯಿಂದ ಮಾರುಕಟ್ಟೆ ಕಡೆಗೆ ಬರುತ್ತಿದ್ದ ಕೆಮಿಕಲ್ ಆಯಿಲ್ ತುಂಬಿದ್ದ ಲಾರಿ ಡಿವೈಡರ್​ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಬಿದ್ದಿದೆ.
ಅದರಡಿ ಸಿಲುಕಿ ಗಂಭೀರವಾಗಿ ಗಾಯಗೊಂಡ ಗಂಗಾಧರ ಮೂರ್ತಿ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕರುನಾಡ ಸಂಜೆ ಪತ್ರಿಕೆಯಿಂದ ಪತ್ರಕರ್ತರಾಗಿ ವೃತ್ತಿ ಜೀವನ ಆರಂಭಿಸಿದ್ದ ಗಂಗಾಧರ ಮೂರ್ತಿ ಸಂಜೆವಾಣಿಯಲ್ಲೂ ಕೆಲ ವರ್ಷಗಳ ಕಾಲ ಕೆಲಸ ಮಾಡಿ‌ ನಂತರ ವಿಜಯವಾಣಿ ಸೇರಿದ್ದರು.
ಘಟನಾ ಸ್ಥಳಕ್ಕೆ ಹಲಸೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ
ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!