Home ಟಾಪ್ ಸುದ್ದಿಗಳು ಬೆಂಗಳೂರು | 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊ*ಲೆ: ಆರೋಪಿಯ ಬಂಧನ

ಬೆಂಗಳೂರು | 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊ*ಲೆ: ಆರೋಪಿಯ ಬಂಧನ

ಬೆಂಗಳೂರು: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ.


ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ, ಕೊಲೆ ಆರೋಪಿ. ಈತನನ್ನು ಸ್ಥಳೀಯರೇ ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.


ಅಭಿಷೇಕ್ ಕುಮಾರ್ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಕೃತ್ಯವೆಸಗಿದ್ದಾನೆ. ಸದ್ಯ ಆರೋಪಿಯನ್ನು ರಾಮಮೂರ್ತಿ ನಗರ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.


ಆರೋಪಿಯನ್ನು ವಶಕ್ಕೆ ನೀಡುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ.

Join Whatsapp
Exit mobile version