ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ತಾಯಿ

Prasthutha|

- Advertisement -

ಬೆಂಗಳೂರು: ತಾಯಿಯೇ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ನಗರದ ಜಾಲಹಳ್ಳಿಯಲ್ಲಿ ನಡೆದಿದೆ.

ಲಕ್ಷ್ಮೀ (9), ಗೌತಮ್ (7) ಕೊಲೆಯಾದ ಮಕ್ಕಳು.

- Advertisement -

ಕೊಲೆ ಮಾಡಿದ ಆರೋಪಿ ಗಂಗಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಆಂಧ್ರ ಮೂಲದವರಾದ ಗಂಗಾದೇವಿ ಕುಟುಂಬ, ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದರು. ಗಂಗಾದೇವಿ ಪತಿ ಪೊಕ್ಸೊ ಕೇಸ್​ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಪತಿ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಪತ್ನಿ ಗಂಗಾದೇವಿ ಖುದ್ದು ಪೊಲೀಸ್​ ಠಾಣೆಗೆ ದೂರು ನೀಡಿದ್ದಳು.



Join Whatsapp