ಬೆಂಗಳೂರು: ತಾಯಿಯೇ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ನಗರದ ಜಾಲಹಳ್ಳಿಯಲ್ಲಿ ನಡೆದಿದೆ.
ಲಕ್ಷ್ಮೀ (9), ಗೌತಮ್ (7) ಕೊಲೆಯಾದ ಮಕ್ಕಳು.
ಕೊಲೆ ಮಾಡಿದ ಆರೋಪಿ ಗಂಗಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಆಂಧ್ರ ಮೂಲದವರಾದ ಗಂಗಾದೇವಿ ಕುಟುಂಬ, ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದರು. ಗಂಗಾದೇವಿ ಪತಿ ಪೊಕ್ಸೊ ಕೇಸ್ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಪತಿ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಪತ್ನಿ ಗಂಗಾದೇವಿ ಖುದ್ದು ಪೊಲೀಸ್ ಠಾಣೆಗೆ ದೂರು ನೀಡಿದ್ದಳು.