► ಟೋಲ್ ದರದ ಪಟ್ಟಿ ಹೀಗಿದೆ
ರಾಮನಗರ: ಬೆಂಗಳೂರು-ಮೈಸೂರು ಹೈವೇಯಲ್ಲಿ ನಾಳೆಯಿಂದ(ಮಾ.14) ಮೊದಲ ಹಂತದ ಟೋಲ್ ಸಂಗ್ರಹಕ್ಕೆ NHAI ತೀರ್ಮಾನಿಸಿದೆ.
ಟೋಲ್ ಸಂಗ್ರಹಕ್ಕೆ ವಿವಿಧ ಸಂಘಟನೆಗಳಿಂದ ತೀವ್ರ ವಿರೋಧ ಹಿನ್ನೆಲೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ರಾಮನಗರ ಡಿಸಿ ಮತ್ತು ಎಸ್ಪಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್ ಅವರು ಮನವಿ ಮಾಡಿದ್ದಾರೆ.
55 ಕಿಲೋಮೀಟರ್ಗೆ 155 ರೂ. ಟೋಲ್ ನಿಗದಿಯಾಗಿದೆ. ಮತ್ತುಳಿದ 55 ಕಿಲೋಮೀಟರ್ಗೆ 155 ರೂ. ನಿಗದಿಪಡಿಸಲಾಗಿದೆ. ಒಟ್ಟು 300 ರೂ. ಟೋಲ್ ಪಾವತಿಸಬೇಕು. ಒಂದು ದಿವಸಕ್ಕೆ 5 ಕೋಟಿ ರೂ. ಸಂಗ್ರಹವಾಗಲಿದೆ. ವರ್ಷಕ್ಕೆ 2,444 ಕೋಟಿ ರೂ. ಸಂಗ್ರಹವಾದಂತಾಗಲಿದೆ. 10 ವರ್ಷ ಟೋಲ್ ಸಂಗ್ರಹಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. 10 ವರ್ಷದಲ್ಲಿ 20,440 ಕೋಟಿ ರೂ. ಸಂಗ್ರಹವಾಗಲಿದೆ. ರಸ್ತೆ ಮಾಡಲು 12 ಸಾವಿರ ಕೋಟಿ ರೂ. ವೆಚ್ಚವಾಗಿದ್ದು, ಅಲ್ಲಿಗೆ 8 ಸಾವಿರ ಕೋಟಿ ರೂ. ಹೆಚ್ಚುವರಿಯಾಗಿ ಟೋಲ್ ವಸೂಲಿಯಾದಂತಾಗಲಿದೆ.
ಬೆಂಗಳೂರಿನಿಂದ ನಿಡಘಟ್ಟವರೆಗಿನ 56-ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಬಳಸುವ ವಾಹನಗಳ ಟೋಲ್ ದರಗಳ ಮಾಹಿತಿಯನ್ನು NHAI ಅಧಿಕಾರಿಗಳು ತಿಳಿಸಿದ್ದಾರೆ. ಕಾರುಗಳು ಮತ್ತು ಇತರ ಲಘು ಮೋಟಾರು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಪಾವತಿಸಬೇಕಾಗುತ್ತದೆ. ಬಸ್ಗಳು 460 ರೂ. ಮತ್ತು ಭಾರೀ ಮೋಟಾರು ವಾಹನಗಳು 750-900 ರೂ.ಗಳ ನಡುವೆ ಪಾವತಿಸಬೇಕಾಗಬಹುದು ಎಂದು NHAI ಅಧಿಕಾರಿಗಳು ತಿಳಿಸಿದ್ದಾರೆ.