Home ಜಾಲತಾಣದಿಂದ ಬೆಂಗಳೂರು-ಮೈಸೂರು ಹೈವೇ ಟೋಲ್​ ಸಂಗ್ರಹ ನಾಳೆಯಿಂದ ಆರಂಭ

ಬೆಂಗಳೂರು-ಮೈಸೂರು ಹೈವೇ ಟೋಲ್​ ಸಂಗ್ರಹ ನಾಳೆಯಿಂದ ಆರಂಭ

► ಟೋಲ್ ದರದ ಪಟ್ಟಿ ಹೀಗಿದೆ

ರಾಮನಗರ: ಬೆಂಗಳೂರು-ಮೈಸೂರು ಹೈವೇಯಲ್ಲಿ ನಾಳೆಯಿಂದ(ಮಾ.14) ಮೊದಲ ಹಂತದ ಟೋಲ್ ಸಂಗ್ರಹಕ್ಕೆ NHAI ತೀರ್ಮಾನಿಸಿದೆ.

ಟೋಲ್ ಸಂಗ್ರಹಕ್ಕೆ ವಿವಿಧ ಸಂಘಟನೆಗಳಿಂದ ತೀವ್ರ ವಿರೋಧ ಹಿನ್ನೆಲೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್​ ಭದ್ರತೆ ಒದಗಿಸುವಂತೆ ರಾಮನಗರ ಡಿಸಿ ಮತ್ತು ಎಸ್‌ಪಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್​ ಅವರು ಮನವಿ ಮಾಡಿದ್ದಾರೆ.

55 ಕಿಲೋಮೀಟರ್​​ಗೆ 155 ರೂ. ಟೋಲ್ ನಿಗದಿಯಾಗಿದೆ. ಮತ್ತುಳಿದ 55 ಕಿಲೋಮೀಟರ್​ಗೆ 155 ರೂ. ನಿಗದಿಪಡಿಸಲಾಗಿದೆ. ಒಟ್ಟು 300 ರೂ. ಟೋಲ್ ಪಾವತಿಸಬೇಕು. ಒಂದು ದಿವಸಕ್ಕೆ 5 ಕೋಟಿ ರೂ. ಸಂಗ್ರಹವಾಗಲಿದೆ. ವರ್ಷಕ್ಕೆ 2,444 ಕೋಟಿ ರೂ. ಸಂಗ್ರಹವಾದಂತಾಗಲಿದೆ. 10 ವರ್ಷ ಟೋಲ್ ಸಂಗ್ರಹಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. 10 ವರ್ಷದಲ್ಲಿ 20,440 ಕೋಟಿ ರೂ. ಸಂಗ್ರಹವಾಗಲಿದೆ. ರಸ್ತೆ ಮಾಡಲು 12 ಸಾವಿರ ಕೋಟಿ ರೂ. ವೆಚ್ಚವಾಗಿದ್ದು, ಅಲ್ಲಿಗೆ 8 ಸಾವಿರ ಕೋಟಿ ರೂ. ಹೆಚ್ಚುವರಿಯಾಗಿ ಟೋಲ್ ವಸೂಲಿಯಾದಂತಾಗಲಿದೆ.

ಬೆಂಗಳೂರಿನಿಂದ ನಿಡಘಟ್ಟವರೆಗಿನ 56-ಕಿಮೀ ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬಳಸುವ ವಾಹನಗಳ ಟೋಲ್ ದರಗಳ ಮಾಹಿತಿಯನ್ನು NHAI ಅಧಿಕಾರಿಗಳು ತಿಳಿಸಿದ್ದಾರೆ. ಕಾರುಗಳು ಮತ್ತು ಇತರ ಲಘು ಮೋಟಾರು ವಾಹನಗಳ ಏಕಮುಖ ಸಂಚಾರಕ್ಕೆ 135 ರೂ. ಪಾವತಿಸಬೇಕಾಗುತ್ತದೆ. ಬಸ್‌ಗಳು 460 ರೂ. ಮತ್ತು ಭಾರೀ ಮೋಟಾರು ವಾಹನಗಳು 750-900 ರೂ.ಗಳ ನಡುವೆ ಪಾವತಿಸಬೇಕಾಗಬಹುದು ಎಂದು NHAI ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version