ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ವೇ| ಪ್ರಯಾಣ ದರ ಹೆಚ್ಚಳ ಮಾಡಿದ KSRTC

Prasthutha|

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್​’ಪ್ರೆಸ್​ ವೇಯಲ್ಲಿ ಪ್ರಯಾಣದ ದರ ಹೆಚ್ಚಳ ಮಾಡಿ ಕೆಎಸ್​ಆರ್​ಟಿಸಿ ಮಂಗಳವಾರ ಪ್ರಕಟಣೆ ಹೊರಡಿಸಿದೆ. ವೋಲ್ವೋ ಹಾಗೂ ಸಾಮಾನ್ಯ ಬಸ್​​ಗಳಿಗೆ ಪ್ರತ್ಯೇಕವಾಗಿ ದರ ಪರಿಷ್ಕರಣೆ ಮಾಡಲಾಗಿದೆ. ಐಷಾರಾಮಿ ಬಸ್​​ಗಳ ಪ್ರಯಾಣ ದರ 20 ರೂ. ಸಾಮಾನ್ಯ ಬಸ್ ಪ್ರಯಾಣದ ದರ 15 ರೂ. ಹಾಗೂ ರಾಜಹಂಸ ಬಸ್​​ಗಳ ಪ್ರಯಾಣ ದರವನ್ನು 18 ರೂ. ಹೆಚ್ಚಳ ಮಾಡಲಾಗಿದೆ ಎಂದು ಕೆಎಸ್​ಆರ್​ಟಿಸಿ ಪ್ರಕಟಣೆ ತಿಳಿಸಿದೆ.

- Advertisement -

ಬಸ್​ಗಳ ಏಕಮುಖ ಸಂಚಾರಕ್ಕೆ 460 ರೂ, ಎರಡು ಕಡೆ ಸಂಚಾರಕ್ಕೆ 690 ರೂ, ಬಸ್​​ಗಳ ತಿಂಗಳ ಟೋಲ್ ಪಾಸ್​ ದರ 15,325 ರೂ. ನಿಗದಿಯಾಗಿದೆ.

ತೀವ್ರ ವಿರೋಧದ ನಡುವೆಯೂ ಮೈಸೂರು ಬೆಂಗಳೂರು ಎಕ್ಸ್​ಪ್ರೆಸ್​ ವೇಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಗಳವಾರ ಬೆಳಿಗ್ಗೆಯಿಂದ ಮೊದಲ ಹಂತದ ಟೋಲ್ ಸಂಗ್ರಹ ಆರಂಭಿಸಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಇದೀಗ ಈ ಹೊರೆಯನ್ನು ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ವರ್ಗಾಯಿಸಿಲು ಮುಂದಾಗಿದೆ.



Join Whatsapp