ಬೆಂಗಳೂರಿನಲ್ಲಿ ನಾಳೆ ಮಧ್ಯರಾತ್ರಿ ವರೆಗೆ ನಿಷೇಧಾಜ್ಞೆ: ಪೊಲೀಸ್ ಆಯುಕ್ತ ಬಿ ದಯಾನಂದ

Prasthutha|

‘ಬಲವಂತದ ಬಂದ್​ ಮಾಡಿದರೆ ಕ್ರಮ’

- Advertisement -

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಬಂದ್​ ವಿಚಾರವಾಗಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದು, ಬಲವಂತದ ಬಂದ್​ಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜತೆಗೆ, ಸೋಮವಾರ ಮಧ್ಯರಾತ್ರಿಯಿಂದ ಮಂಗಳವಾರ ಮಧ್ಯರಾತ್ರಿ ವರೆಗೆ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಹೇರಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. 60 ಕೆಎಸ್​ಆರ್​ಪಿ, 40 ಸಿಎಆರ್ ತುಕಡಿ ನಿಯೋಜನೆ ಮಾಡುತ್ತೇವೆ. ಅಗತ್ಯವಿದ್ದಲ್ಲಿ ತಮಿಳುನಾಡು ಸಾರಿಗೆ ಬಸ್​ಗಳಿಗೆ ಭದ್ರತೆ ಒದಗಿಸುತ್ತೇವೆ. ಪೊಲೀಸರು, ಕೆಎಸ್​ಆರ್​ಪಿ ಸಿಬ್ಬಂದಿ, ಸ್ಥಳೀಯ ಅಧಿಕಾರಿಗಳು, ಹೊಯ್ಸಳ ಪೊಲೀಸರು ಎಲ್ಲರು ಇರಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಒತ್ತಾಯಪೂರ್ವಕವಾಗಿ ಬಂದ್ ಮಾಡಲು ಅವಕಾಶ ಇಲ್ಲ. ಸಾರ್ವಜನಿಕರು ತಾವೇಗಿಯೇ ಬಂದ್ ಮಾಡಿದರೆ ತೊಂದರೆ ಇಲ್ಲ. ಆದರೆ, ಬಲವಂತವಾಗಿ ಮಾಡುವಂತೆ ಇಲ್ಲ ಎಂದು ಬಿ ದಯಾನಂದ ತಿಳಿಸಿದ್ದಾರೆ.

ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಸಿವಿಲ್ ಪೊಲೀಸರೊಂದಿಗೆ ಸಿಐಡಿ, ಐಎಸ್​​​ಡಿ ಅಧಿಕಾರಿಗಳೂ ಕರ್ತವ್ಯ ನಿರ್ವಹಿಸಲಿದ್ದಾರೆ. ನಗರದಲ್ಲಿ ಒಟ್ಟು ನೂರು ಪ್ಲಟೂನ್​​ಗಳು (ತುಕಡಿ) ನಿಯೋಜನೆಯಾಗಲಿವೆ. ಕೆಎಸ್​​ಆರ್​ಪಿಯ 60 ತುಕಡಿ, ಸಿಎಆರ್ 40 ತುಕಡಿ ನಿಯೋಜನೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಮಿಳುನಾಡಿನ ಸಾರಿಗೆ ಸಂಸ್ಥೆ ಹಾಗೂ ಇತರ ಸಾರಿಗೆ ಸಂಸ್ಥೆಗಳು ತಾವಾಗಿಯೇ ನಿರ್ಧಾರ ತೆಗೆದುಕೊಳ್ಳಬೇಕು. ಅವಶ್ಯಕತೆ ಇದ್ದಲಿ ಭದ್ರತೆ ನೀಡಲಿದ್ದೇವೆ. ನಾಳೆ ಪ್ರತಿಭಟನೆ ಹಾಗೂ ಮೆರವಣಿಗೆಗೆ ಅವಕಾಶ ಇಲ್ಲ. ನಗರದಲ್ಲಿ ನಾಳೆ ಒಟ್ಟು ಹತ್ತು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೆ ಮೆರವಣಿಗೆಗೆ ಅವಕಾಶ ಕೇಳಿದ್ದಾರೆ. ಬಂದ್ ಸಮಯದಲ್ಲಿ ಏನೇ ಅಹಿತಕರ ಘಟನೆ ಸಂಭವಿಸಿದರೆ ಬಂದ್​ಗೆ ಕರೆ ಕೊಟ್ಟವರೇ ಹೊಣೆ ಎಂಬುದಾಗಿ ಹೈಕೋರ್ಟ್ ಸಹ ಹೇಳಿದೆ ಎಂದು ಅವರು ಹೇಳಿದ್ದಾರೆ.

Join Whatsapp