ಬೆಂಗಳೂರು | RCB-CSK ಪಂದ್ಯ: ಕ್ರೀಡಾಂಗಣ ಸುತ್ತಮುತ್ತ ಬಿಗಿ ಭದ್ರತೆ

Prasthutha|

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಕ್ರೀಡಾಂಗಣ ಸುತ್ತಮುತ್ತ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

- Advertisement -

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ತಂಡಗಳ ನಡುವೆ ಪಂದ್ಯ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಕ್ರೀಡಾಂಗಣಕ್ಕೆ ಬರುವ ನಿರೀಕ್ಷೆ ಇದೆ.

ಕ್ರೀಡಾಂಗಣದ ಪ್ರವೇಶ ದ್ವಾರ ಹಾಗೂ ಅಕ್ಕ–ಪಕ್ಕದ ಸ್ಥಳಗಳಲ್ಲಿಯೂ ಪೊಲೀಸರು ಭದ್ರತೆ ಕೈಗೊಳ್ಳಲಿದ್ದಾರೆ. ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ ಶ್ವಾನದಳದ ಸಿಬ್ಬಂದಿ, ಕ್ರೀಡಾಂಗಣ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಶುಕ್ರವಾರ ಪರಿಶೀಲನೆ ನಡೆಸಿದರು.

Join Whatsapp