ಬೆಂಗಳೂರು: ಪ್ಯಾಲೆಸ್ತೀನ್ ಬೆಂಬಲಿಸಿ ನೂರಾರು ಜನರಿಂದ ಮಾನವ ಸರಪಳಿ

Prasthutha|

►ಪ್ರತಿಭಟನಾಕಾರರು ವಶಕ್ಕೆ

- Advertisement -

ಬೆಂಗಳೂರು: ಇಸ್ರೇಲ್ ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಖಂಡಿಸಿ, ಬೆಂಗಳೂರಿನ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ನೂರಾರು ಜನರು ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ಮೌನ ಪ್ರತಿಭಟನೆ ನಡೆಸಿದರು.


ಎಂಜಿ ರಸ್ತೆಯ ಉದ್ದಕ್ಕೂ ಮಾನವ ಸರಪಳಿ ನಿರ್ಮಿಸಿ ಮೇಣದಬತ್ತಿ ಹಿಡಿದು ಪ್ಯಾಲೆಸ್ತೀನ್ ಗೆ ಬೆಂಬಲ ನೀಡುವಂತೆ ಕೋರಿಕೊಂಡರು.

- Advertisement -


ಪ್ರತಿಭಟನೆ ನಡೆಸಿದ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವರನ್ನು ಕಬ್ಬನ್ ಪಾರ್ಕ್ ಮತ್ತು ಅಶೋಕ್ ನಗರದ ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿದೆ.