Home ಟಾಪ್ ಸುದ್ದಿಗಳು ಬೆಂಗಳೂರು: ಮಹಿಳೆಯರ ಶೌಚಾಲಯದಲ್ಲಿ ​ಮೊಬೈಲ್ ಇಟ್ಟಿದ್ದ ಮನೋಜ್ ಬಂಧನ

ಬೆಂಗಳೂರು: ಮಹಿಳೆಯರ ಶೌಚಾಲಯದಲ್ಲಿ ​ಮೊಬೈಲ್ ಇಟ್ಟಿದ್ದ ಮನೋಜ್ ಬಂಧನ

ಬೆಂಗಳೂರು: ಕೆಫೆಯ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಮೊಬೈಲ್ ಇಟ್ಟಿದ್ದ ಆರೋಪಿಯನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ 23 ವರ್ಷದ ಮನೋಜ್ ಬಂಧಿತ ಆರೋಪಿ.

ಆರೋಪಿ ಮನೋಜ್ ಕಾಫಿ ಶಾಪ್​ನಲ್ಲಿ ಕಾಫಿ ಮೇಕರ್ ಆಗಿ ಕೆಲಸ ಮಾಡುತ್ತಿದ್ದನು. ಮನೋಜ್​ ಶನಿವಾರ (ಆ.10) ಬೆಳಗ್ಗೆ ಮಹಿಳೆಯರ ಶೌಚಾಲಯಕ್ಕೆ ಹೋಗಿದ್ದಾನೆ.

ಅಲ್ಲಿ ಕಸದ ಬುಟ್ಟಿಗೆ ಹೋಲ್​ ಮಾಡಿದ್ದಾನೆ. ನಂತರ ಮೊಬೈಲ್​​ ಅನ್ನು ಫ್ಲೈಟ್​ ಮೂಡ್​​ಗೆ ಹಾಕಿ ವಿಡಿಯೋ ಚಿತ್ರಕರಣಕ್ಕೆ ಇರಿಸಿ, ಹೊರ ಬಂದು ಯಥಾಪ್ರಕಾರ ತನ್ನ ಕೆಲಸದಲ್ಲಿ ತೊಡಗಿಕೊಂಡಿದ್ದಾನೆ. ನಂತರ ಶೌಚಾಲಯಕ್ಕೆ ಹೋದ ಮಹಿಳೆಯೊಬ್ಬರು ಮೊಬೈಲ್​ ಇರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಸದಾಶಿವನಗರ ಪೊಲೀಸರು ಪರಿಶೀಲನೆ ನಡೆಸಿ, ಆರೋಪಿ ಮನೋಜ್​ನನ್ನು ಬಂಧಿಸಿದ್ದಾರೆ.

Join Whatsapp
Exit mobile version