Home ಟಾಪ್ ಸುದ್ದಿಗಳು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಯೂನಿವರ್ಸಿಟಿ ಎಂದು ಮರುನಾಮಕರಣ

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಯೂನಿವರ್ಸಿಟಿ ಎಂದು ಮರುನಾಮಕರಣ

0

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದೆ. ಮಾಜಿ ಪ್ರಧಾನಿ, ದಿವಂಗತ ಡಾ| ಮನಮೋಹನ್ ಸಿಂಗ್ ಅವರ ಹೆಸರನ್ನು ಬೆಂಗಳೂರು ವಿವಿಗೆ ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ​​ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು ವಿವಿ ಹೆಸರು ಬದಲಾವಣೆ, ಬಜೆಟ್ ​ನ ಅನಿರೀಕ್ಷಿತ ಘೋಷಣೆಗಳಲ್ಲಿ ಒಂದು. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭಾರತದ ಆಧುನಿಕ ಆರ್ಥಿಕತೆಯ ರೂವಾರಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿರುವ ಮನಮೋಹನ್ ಸಿಂಗ್ ಅವರ ಗೌರವ ಸೂಚಕವಾಗಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡಲಾಗಿದೆ.

ಅವರು ಹಣಕಾಸು ಸಚಿವರಾಗಿ ಮತ್ತು ಪ್ರಧಾನಿಯಾಗಿ ಮಾಡಲಾಗಿದ್ದ ಸಾಧನೆಗಳು, ದೇಶದ ಅರ್ಥ ವ್ಯವಸ್ಥೆಯ ಸುಧಾರಣೆಗೆ ತೆಗೆದುಕೊಂಡ ಕ್ರಮಗಳು, ಅವುಗಳ ಪರಿಣಾಮಗಳನ್ನು ಅಧ್ಯಯನ ಮಾಡಿ ಗುರುತಿಸಲೆಂದು ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಸಂಶೋಧನೆ ಮತ್ತು ಅಧ್ಯಯನ ಕೇಂದ್ರವನ್ನು ಸ್ಥಾಪಿಸುತ್ತಿರುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಡಿಸೆಂಬರ್​​ನಲ್ಲಿ ಘೋಷಿಸಿದ್ದರು. ಇದೀಗ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಅವರ ಹೆಸರನ್ನೇ ಇಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್​​ನಲ್ಲಿ ಘೋಷಣೆ ಮಾಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version