Home ಟಾಪ್ ಸುದ್ದಿಗಳು ಬೆಂಗಳೂರು | ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳ...

ಬೆಂಗಳೂರು | ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ 37 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಇಬ್ಬರು ಆರೋಪಗಳನ್ನು ಕೇಂದ್ರ ವಿಭಾಗದ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.


ಆರೋಪಿಗಳನ್ನು ಗಣೇಶ್ (23) ಮತ್ತು ಶರವಣ (35) ಎಂದು ಗುರುತಿಸಲಾಗಿದೆ. ಇಬ್ಬರ ವಿರುದ್ಧ ಈಗಾಗಲೇ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳಿರುವುದಾಗಿ ತಿಳಿದುಬಂದಿದೆ.


ಜ.19ರಂದು ರಾತ್ರಿ ಸುಮಾರು 11.30ಕ್ಕೆ ಕೆ.ಆರ್.ಮಾರುಕಟ್ಟೆ ಗೋಡೌನ್ ಸ್ಟ್ರೀಟ್ ನಲ್ಲಿ ತಮಿಳುನಾಡು ಮೂಲದ 37 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, 650 ರೂ. ನಗದು, ಚಿನ್ನದ ತಾಳಿ, ಓಲೆ, ಬೆಳ್ಳು ಕಾಲು ಚೈನ್ ಹಾಗೂ ಮೊಬೈಲ್ ದೋಚಿಕೊಂಡು ಆರೋಪಿಗಳು ಪರಾರಿಯಾಗಿದ್ದರು. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ, ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.


ಹಲವು ವರ್ಷಗಳಿ ಹಿಂದೆಯೇ ಕುಟುಂಬದಿಂದ ದೂರವಾಗಿರುವ ಇಬ್ಬರು ಆರೋಪಿಗಳು ಕೆ.ಆರ್.ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ರಾತ್ರಿ ವೇಳೆ ಮಾರುಕಟ್ಟೆಯಲ್ಲಿಯೇ ಖಾಲಿ ಜಾಗಗಳಲ್ಲಿ ಮಲಗುತ್ತಿದ್ದರು ಎಂದು ತಿಳಿದುಬಂದಿದೆ.

Join Whatsapp
Exit mobile version