ಬಂಗಾರಪ್ಪನವರು ಚಿಟಿಕೆ ಹೊಡೆಯೋದ್ರಲ್ಲಿ ಉತ್ತರ ಕೊಟ್ಟಿದ್ರು: ಮಧು ಬಂಗಾರಪ್ಪ

Prasthutha|

ರಾಯಚೂರು: ಸಿದ್ದರಾಮಯ್ಯನವರು ಬಂಗಾರಪ್ಪ ತೆಗೆದುಕೊಂಡ ತೀರ್ಮಾನ ತೆಗೆದುಕೊಂಡರೆ ಅವರ ಜೊತೆ ಇರುತ್ತೇವೆ. ಕಾವೇರಿ ನೀರಿನ ವಿಚಾರದಲ್ಲಿ ಬಂಗಾರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಚಿಟಿಕೆ ಹೊಡೆಯುವುದರಲ್ಲಿ ಉತ್ತರ ಕೊಟ್ಟಿದ್ದರು. ಬಂಗಾರಪ್ಪನವರ ಕಾಲದ ಕಾನೂನು ಬೇರೆ, ಈಗ ಬೇರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

- Advertisement -


ಈ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯನವರು ಬಂಗಾರಪ್ಪ ತೆಗೆದುಕೊಂಡ ತೀರ್ಮಾನ ತೆಗೆದುಕೊಂಡರೆ ಅವರ ಜೊತೆ ಇರುತ್ತೇವೆ. ಪ್ರಾಧಿಕಾರ ವಿರುದ್ಧ ಹೋಗಿದ್ದಕ್ಕೆ ಹೈಕೋರ್ಟ್ ನಲ್ಲಿ ಆಗ ನಮಗೆ ಛೀಮಾರಿ ಹಾಕಿದ್ದರು. ಅಷ್ಟರೊಳಗೆ ನಮ್ಮ ತಂದೆಯವರು ಏನೇನು ಮಾಡಬೇಕೋ ಮಾಡಿ ಮುಗಿಸಿದ್ದರು ಎಂದರು.

Join Whatsapp