ಢಾಕಾ: ಈ ವರ್ಷಾಂತ್ಯಕ್ಕೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಇವಿಎಂ ಕೈಬಿಟ್ಟು ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಬಾಂಗ್ಲಾದೇಶದ ಚುನಾವಣಾ ಆಯೋಗವು ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿದ ಬಾಂಗ್ಲಾದೇಶ ಚುನಾವಣಾ ಆಯೋಗದ ಕಾರ್ಯದರ್ಶಿ, 300 ಸಂಸದೀಯ ಕ್ಷೇತ್ರಗಳ ಪೈಕಿ 150 ಕ್ಷೇತ್ರಗಳಲ್ಲಿ ಇವಿಎಂ ಬಳಸಲು ನಿರ್ಧರಿಸಲಾಗಿತ್ತು. ಇದಕ್ಕಾಗಿ ಆಯೋಗವು 8700 ಕೋಟಿ ಟಾಕಾ ವೆಚ್ಚದ ಪ್ರಸ್ತಾಪ ಸಲ್ಲಿಸಿತ್ತು. ಆದರೆ ಬಳಕೆಯಾದ ಇವಿಎಂ ಮರು ಬಳಕೆಗೆ ಸರ್ಕಾರವು ಒಪ್ಪಿಗೆ ನೀಡಲಿಲ್ಲ. ಹಾಗಾಗಿ, ಆಯೋಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದು, ಬ್ಯಾಲೆಟ್ ಪೇಪರ್ ಬಳಸಿಕೊಂಡು ಚುನಾವಣೆ ನಡೆಸಲು ಮುಂದಾಗಿದೆ ಎಂದು ಹೇಳಿದ್ದಾರೆ.