ಬೆಂಗಳೂರು: ಭಾರತದಲ್ಲಿರುವ ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಬಾಂಗ್ಲಾದೇಶದ ಶಿಕ್ಷಣ ಸಚಿವೆ ದೀಪು ಮೋನಿ ಅವರು ಆಗ್ರಹಿಸಿದ್ದಾರೆ. ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯು ದೇಶಕ್ಕೆ ಶಾಂತಿ ಮತ್ತು ಸುಸ್ಥಿರತೆಯನ್ನು ತರುತ್ತದೆ ಎಂದು ಅವರು ತಿಳಿಸಿರುವ ಕುರಿತು ಮಾಧ್ಯಮಗಳು ವರದಿ ಮಾಡಿವೆ.
ಬೆಂಗಳೂರಿನಲ್ಲಿ ನಡೆದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ಅಲ್ಪಸಂಖ್ಯಾತರನ್ನು ರಕ್ಷಿಸುವಂತೆ ಕರೆ ನೀಡಿದ್ದಾರೆ. ‘ಭಾರತವು ಗೌರವಾನ್ವಿತ ಜಾಗತಿಕ ಶಕ್ತಿಗಳಲ್ಲಿ ಒಂದಾಗಿ ಹೊರ ಹೊಮ್ಮಬೇಕಾದರೆ, ಸಂವಿಧಾನದಲ್ಲಿ ಪ್ರತಿಪಾದಿಸಿರುವ ಅಂಶಗಳನ್ನು ಅನುಷ್ಠಾನಗೊಳಿಸಬೇಕು ಎಂದು ಹೇಳಿದ್ದಾರೆ.
ನಾಗರಿಕರ ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಎಲ್ಲಾ ವರ್ಗದ ಮಹಿಳೆಯರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು ಮತ್ತು ಖಾತರಿಪಡಿಸುವುದು ಜಾಗತಿಕವಾಗಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲು ಭಾರತಕ್ಕೆ ವೇದಿಕೆ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಅವರು ಒತ್ತಿ ಹೇಳಿದ್ದಾರೆ.