Home ಟಾಪ್ ಸುದ್ದಿಗಳು ಕೋಲ್ಕತ್ತಕ್ಕೆ ಬಂದಿದ್ದ ಬಾಂಗ್ಲಾದೇಶದ ಸಂಸದ ಅಜೀಮ್ ಅನಾರ್ ಶವವಾಗಿ ಪತ್ತೆ

ಕೋಲ್ಕತ್ತಕ್ಕೆ ಬಂದಿದ್ದ ಬಾಂಗ್ಲಾದೇಶದ ಸಂಸದ ಅಜೀಮ್ ಅನಾರ್ ಶವವಾಗಿ ಪತ್ತೆ

ಕೋಲ್ಕತ್ತ: ಬಾಂಗ್ಲಾದೇಶದ ಜೆನೈದಾ-4 ಕ್ಷೇತ್ರದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರು ನಾಪತ್ತೆಯಾದ ಎಂಟು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲ್ಕತ್ತದ ನ್ಯೂ ಟೌನ್ ನ ಸಂಜೀವ ಗಾರ್ಡನ್ ನಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ ಅನಾರ್ ಅವರ ಮೃತದೇಹ ತುಂಡುಗಳಾಗಿ ಕತ್ತರಿಸಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅನ್ವರುಲ್ ಅಜೀಂ ಅನಾರ್ ಕೊಲೆ ಪೂರ್ವಯೋಜಿತ ಎಂದು ಪೊಲೀಸರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಅಜೀಮ್ ಅನಾರ್ ಅವರು ಮೇ 12 ರಂದು ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಕ್ಕೆ ಆಗಮಿಸಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಅವರು ನಾಪತ್ತೆಯಾಗಿದ್ದಾರೆ ಎಂದು ಕೋಲ್ಕತ್ತದಲ್ಲಿರುವ ಬಾಂಗ್ಲಾದೇಶದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದರು.

Join Whatsapp
Exit mobile version