ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ.
ಕಳೆದ ತಿಂಗಳು ನಡೆದ ಹಿಂಸಾತ್ಮಕ ಘರ್ಷಣೆಯ ಸಮಯದಲ್ಲಿ ಕಿರಾಣಿ ಅಂಗಡಿ ಮಾಲೀಕನ ಸಾವಿನ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಮತ್ತಿತರ ಆರು ಜನರ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ವಿವಾದಾತ್ಮಕ ಉದ್ಯೋಗ ಮೀಸಲಾತಿ ವ್ಯವಸ್ಥೆಗೆ ಸಂಬಂಧಿಸಿದಂತೆ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿದ್ದ 76 ವರ್ಷದ ಹಸೀನಾ ವಿರುದ್ಧ ಮೊಟ್ಟಮೊದಲ ಬಾರಿಗೆ ಪ್ರಕರಣ ದಾಖಲಾಗಿದೆ.