Home ಟಾಪ್ ಸುದ್ದಿಗಳು ಬಾಂಗ್ಲಾದೇಶ: ಮತ್ತೆ ಹಿಂಸಾರೂಪ ತಾಳಿದ ಪ್ರತಿಭಟನೆ, 32 ಮಂದಿ ಮೃತ

ಬಾಂಗ್ಲಾದೇಶ: ಮತ್ತೆ ಹಿಂಸಾರೂಪ ತಾಳಿದ ಪ್ರತಿಭಟನೆ, 32 ಮಂದಿ ಮೃತ

ಢಾಕಾ: ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಮತ್ತೆ ಪ್ರತಿಭಟನೆ ಹಿಂಸಾರೂಪ ತಾಳಿದೆ. ದೇಶದ ಪ್ರಧಾನಿ ಶೇಖ್‌ ಹಸೀನಾ ಅವರ ರಾಜೀನಾಮೆಗೆ ಒತ್ತಾಯಿಸಿ ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ 32 ಜನ ಮೃತಪಟ್ಟಿದ್ದಾರೆ.

ಪ್ರಧಾನಿಯ ರಾಜೀನಾಮೆಗೆ ಒತ್ತಾಯಿಸಿ ದೇಶದ ರಾಜಧಾನಿ ಢಾಕಾ ಸೇರಿ 13 ಜಿಲ್ಲೆಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದೆ. ಗುಂಪುಗಳನ್ನು ಚದುರಿಸಲು ಪೊಲೀಸರು ಅಶ್ರುವಾಯು, ಲಾಠಿ ಚಾರ್ಜ್‌ ಮಾಡಿದ್ದಾರೆ. ಇಷ್ಟಾದರೂ ಪ್ರತಿಭಟನೆಯು ಹಿಂಸಾರೂಪ ತಾಳಿದೆ. ಸರ್ಕಾರಿ ಕಚೇರಿಗಳ ಮೇಲೆ ದಾಳಿ, ಸರ್ಕಾರಿ ಆಸ್ತಿ-ಪಾಸ್ತಿ ಧ್ವಂಸ, ಪೊಲೀಸರು ಹಾಗೂ ಯೋಧರ ಮೇಲೆಯೇ ಕಲ್ಲುತೂರಾಟ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆದಿದೆ.

Join Whatsapp
Exit mobile version