ಬಾಂಗ್ಲಾದೇಶ ಸುಪ್ರೀಂ ಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಗೆ 11 ವರ್ಷಗಳ ಜೈಲು

Prasthutha|

ಢಾಕಾ: ಬಾಂಗ್ಲಾದೇಶ ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿಯೊಬ್ಬರಿಗೆ 11 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

- Advertisement -

ಭ್ರಷ್ಟಾಚಾರ ಆರೋಪದಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಸಿನ್ಹಾ ಅವರನ್ನು ಢಾಕಾ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.
ಸಿನ್ಹಾ ಅವರು ಮುಸ್ಲಿಂ ಬಹುಸಂಖ್ಯಾತ ದೇಶವಾಗಿರುವ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೊತ್ತ ಮೊದಲ ಮುಖ್ಯ ನ್ಯಾಯಮೂರ್ತಿಯಾಗಿದ್ದರು.


70 ವರ್ಷದ ಸಿನ್ಹಾ ಅವರ ಅನುಪಸ್ಥಿತಿಯಲ್ಲಿ ನ್ಯಾಯಾಲಯ ಈ ತೀರ್ಪು ನೀಡಿದೆ. ಆದರೆ ದೇಶದ ಪ್ರತಿಪಕ್ಷಗಳು ಮತ್ತು ಸಿನ್ಹಾ ಬೆಂಬಲಿಗರು ಈ ಪ್ರಕರಣವನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

- Advertisement -

ಸಿನ್ಹಾ ಅವರು ದೇಶದ ಖಾಸಗಿ ಬ್ಯಾಂಕ್ ಅಧಿಕಾರಿಯಿಂದ 4,71,000 ಡಾಲರ್ ಲಂಚ ಸ್ವೀಕರಿಸಿದ್ದಾರೆ ಎಂದು ಈ ತೀರ್ಪು ನೀಡಲಾಗಿದೆ.

Join Whatsapp