Home ಟಾಪ್ ಸುದ್ದಿಗಳು ಸಿಎಂ ಮಂಗಳೂರಿನಲ್ಲಿ ಇರುವಾಗಲೇ ಬ್ಯಾಂಕ್ ಲೂಟಿ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ

ಸಿಎಂ ಮಂಗಳೂರಿನಲ್ಲಿ ಇರುವಾಗಲೇ ಬ್ಯಾಂಕ್ ಲೂಟಿ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ

►ಆರೋಪಿಗಳ ಶೀಘ್ರ ಪತ್ತೆಗೆ ಕ್ರಮ, ಎಲ್ಲಾ ಟೋಲ್ ಗೇಟ್ ಗಳಲ್ಲಿ ತಪಾಸಣೆ

ಮಂಗಳೂರು: ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ದರೋಡೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಪಿಗಳ ಶೀಘ್ರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪಶ್ಚಿಮ ವಲಯ ಐಜಿ ಅಮಿತ್, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಎಸ್ಪಿ ಯತೀಶ್, ಡಿವೈಎಸ್ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಎಲ್ಲಾ ಟೋಲ್ ಗೇಟ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ನುಗ್ಗಿದ ದರೋಡೆಕೋರರು ಸಿಬ್ಬಂದಿಯನ್ನು ಬೆದರಿಸಿ ನಗ-ನಗದು ದರೋಡಗೈದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದ್ದು, ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಬಂದೂಕು ತೋರಿಸಿ ಈ ಕೃತ್ಯ ನಡೆದಿದೆ.

ಫಿಯೇಟ್ ಕಾರಿನಲ್ಲಿ ಬಂದ ಈ ತಂಡ ಚಿನ್ನ, ನಗದುಗಳೆಲ್ಲವನ್ನು ಕಳವು ಮಾಡಿ ಮಂಗಳೂರು ಕಡೆಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Join Whatsapp
Exit mobile version