ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Prasthutha|

ಕಲ್ಲಡ್ಕ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

- Advertisement -


ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಬಾಳ್ತಿಲ ನಿವಾಸಿ ವೈಷ್ಣವಿ ಆತ್ಮಹತ್ಯೆಗೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.


ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ವೈಷ್ಣವಿ, ಪಿಯುಸಿಯಲ್ಲಿ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ಆಕೆಯ ಪರೀಕ್ಷೆ ನಾಳೆ ನಿಗದಿಯಾಗಿತ್ತು. ಇಂದು ಕಾಲೇಜಿಗೆ ಹೊರಟ ವೈಷ್ಣವಿ ಬಳಿಕ ಏನೋ ಮರೆತು ಹೋಗಿದ್ದೇನೆಂದು ವಾಪಸ್ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.



Join Whatsapp