Home ಕರಾವಳಿ ಬಂಟ್ವಾಳ | ಭಾರಿ ಮಳೆಗೆ ಮನೆ ಮೇಲೆ ಗುಡ್ಡ ಕುಸಿತ: ಮೃತರ ಸಂಖ್ಯೆ ಮೂರಕ್ಕೇರಿಕೆ

ಬಂಟ್ವಾಳ | ಭಾರಿ ಮಳೆಗೆ ಮನೆ ಮೇಲೆ ಗುಡ್ಡ ಕುಸಿತ: ಮೃತರ ಸಂಖ್ಯೆ ಮೂರಕ್ಕೇರಿಕೆ


ಬಂಟ್ವಾಳ: ಕಾರ್ಮಿಕರು ಉಳಿದುಕೊಂಡ ಮನೆಯ ಮೇಲೆ ಗುಡ್ಡ ಕುಸಿದಿದ್ದು, ಮಣ್ಣಿನಡಿ ಸಿಲುಕಿಕೊಂಡ ನಾಲ್ವರು ಕಾರ್ಮಿಕರ ಪೈಕಿ ಮೂರು ಸಾವನ್ನಪ್ಪಿದ್ದಾರೆ.

ಪಾಲಕ್ಕಾಡು ನಿವಾಸಿ ವಿಜು (45) ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಕೊಟ್ಟಾಂ ನಿವಾಸಿ ಬಾಬು (46) ಹಾಗೂ ಸಂತೋಷ್ ಅಲಪುರ (45) ಕೂಡ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಕಣ್ಣೂರು ನಿವಾಸಿ ಜಾನಿ ( 44 ) ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಂಜಿಕಲ್ಲು ಗ್ರಾಮದ ಮುಕ್ಕುಡದಲ್ಲಿ ಬುಧವಾರ ಸಂಜೆ ಹೆನ್ರಿ ಕಾರ್ಲೊ ಅವರ ಮನೆಯ ಬಳಿಯ ಶೆಡ್ ನಲ್ಲಿ ಉಳಿದುಕೊಂಡು ರಬ್ಬರ್ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು. ಅದರಲ್ಲಿ ಮೂವರನ್ನು ಜೆಸಿಬಿ ಮೂಲಕರಕ್ಷಣೆ ಮಾಡಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದರು.

Join Whatsapp
Exit mobile version