Home ಟಾಪ್ ಸುದ್ದಿಗಳು ಬಂಟ್ವಾಳ | ತಾಯಿ ಮಗಳಿಗೆ ಚಾಕು ತೋರಿಸಿ ದರೋಡೆ: 7 ಮಂದಿ ಆರೋಪಿಗಳ ಬಂಧನ

ಬಂಟ್ವಾಳ | ತಾಯಿ ಮಗಳಿಗೆ ಚಾಕು ತೋರಿಸಿ ದರೋಡೆ: 7 ಮಂದಿ ಆರೋಪಿಗಳ ಬಂಧನ

ಬಂಟ್ವಾಳ: ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣದ ಆರೋಪಿಗಳಾದ 7 ಜನರನ್ನು ಬಂಧಿಸಿದ್ದಾರೆ.


ಬಂಧಿತ ಆರೋಪಿಗಳನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್ ಎಲ್. ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ @ ಪ್ರವೀಣ್ (36), ಸುಧೀರ್ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದ ನಿವಾಸಿ ಪ್ರಸ್ತುತ ಚಿಕ್ಕಮಗಳೂರಿನ ಗೌರಿ ಕಾಲುವೆಯಲ್ಲಿ ವಾಸವಾಗಿದ್ದ ಮಹಮ್ಮದ್ ಹನೀಫ್ (49) ಎಂದು ಗುರುತಿಸಲಾಗಿದೆ.


ಇನ್ನು ಬಂಧಿತರಿಂದ ದರೋಡೆಗೈದ 3.15 ಲಕ್ಷ ಮೌಲ್ಯದ 54 ಗ್ರಾಂ ಚಿನ್ನಾಭರಣ ಹಾಗೂ ರೂ. 8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ. 2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Join Whatsapp
Exit mobile version