ಬಂಟ್ವಾಳ: ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು

Prasthutha|

ಬಂಟ್ವಾಳ: ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಬಂಟ್ವಾಳ – ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ಸಂಭವಿಸಿದೆ.

- Advertisement -

ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದಿದ್ದಾರೆ. ಇನ್ನು ಬೆಂಕಿ ಕಾಣಿಸಿಕೊಂಡ ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಘಟನೆಯಿಂದ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು ಎನ್ನಲಾಗಿದೆ.

Join Whatsapp