ಬಂಟ್ವಾಳ: ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ತೆರಳಿ ಮತಯಾಚನೆ ಮಾಡುತ್ತಿದ್ದ ಸಂದರ್ಭ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು ಎಂಬಲ್ಲಿ ನಡೆದಿದೆ.
ಪ್ರವೀಣ್ ಚಂದ್ರ ನಾಯಕ್ (45) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪ್ರವೀಣ್ ಅವರು ವೃತ್ತಿಯಲ್ಲಿ ಛಾಯಗ್ರಾಹಕನಾಗಿದ್ದು, ಬಿಜೆಪಿಯ ಕಾರ್ಯಕರ್ತನಾಗಿದ್ದರು.
ಪ್ರವೀಣ್ ಶುಕ್ರವಾರ ಚುನಾವಣಾ ಪ್ರಚಾರದ ವೇಳೆ ತಲೆ ಸುತ್ತು ಸಂಭವಿಸಿ ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.