ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ

Prasthutha|

ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ನಡೆದಿದೆ.

- Advertisement -


ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಕೆಹಟ್ಟಿ ನಿವಾಸಿ ನಯನಾ ಎಂ.ಜಿ (27) ಆತ್ಮಹತ್ಯೆ ಮಾಡಿಕೊಂಡ ಯುವತಿ.


ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕುಳಿತಿದ್ದ ಸೀಟ್ ನಲ್ಲಿ ಬ್ಯಾಗ್ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Join Whatsapp