ಬಂಟ್ವಾಳ | ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ: ತಪ್ಪಿಸಲೆತ್ನಿಸಿದ ಲಾರಿ ಚಾಲಕನನ್ನು ಬೆನ್ನಟ್ಟಿದ ಸ್ಥಳೀಯರು

Prasthutha|

ಬಂಟ್ವಾಳ: ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.

- Advertisement -

ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಸುಮಾರು 5 ಕಿ.ಮೀ ದೂರದಲ್ಲಿ ಲಾರಿಯನ್ನು ಬೆನ್ನಟ್ಟಿದ ಯುವಕರ ತಂಡ ತಡೆದು ನಿಲ್ಲಿಸಿ, ಲಾರಿ ಚಾಲಕನಿಗೆ ಹಲ್ಲೆ ನಡೆಸಿದ್ದಾರೆಂದು ವರದಿಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -