ಬಂಟ್ವಾಳ | ರೋಗಿಯನ್ನು ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ: ಚಾಲಕ ಮೃತ್ಯು

Prasthutha|

ಬಂಟ್ವಾಳ: ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅಂಬುಲೆನ್ಸ್ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಬಳಿ ನಡೆದಿದೆ.

- Advertisement -


ಮೃತ ಅಂಬುಲೆನ್ಸ್ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ.


ಬೆಳ್ತಂಗಡಿಯಿಂದ ಮಂಗಳೂರಿಗೆ ರೋಗಿಯೊಬ್ಬರನ್ನು ಕೊಂಡೊಯ್ಯುತ್ತಿರುವ ವೇಳೆ ವಗ್ಗ ಬಳಿ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಶಬೀರ್ ಎಂಬವರು ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕೊಂಡು ಹೋದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp