ಬಂಟ್ವಾಳ: ತುಂಬೆ ಬಳಿ ಸರಕಾರಿ ಅಧಿಕಾರಿಗಳು ಸಂಚರಿಸುತ್ತಿದ್ದ ಕಾರಿನ ಗಾಜು ಪುಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಸಜೀಪ ಕೊಣೆಮಾರ್ ನಿವಾಸಿ ಸಂಶುದ್ದೀನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಮಂಗಳೂರು ಜಿಪಂ ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಅವರು, ಪುತ್ತೂರಿನಲ್ಲಿ ನಡೆಯುವ ಅಗತ್ಯ ಮೀಟಿಂಗ್ ನಲ್ಲಿ ಭಾಗವಹಿಸಲು ಜಿಲ್ಲಾ ಪಂಚಾಯತ್ ನ ಮೂವರು ಅಧಿಕಾರಿಗಳನ್ನು ಕಾರಿನಲ್ಲಿ ಮಂಗಳೂರಿನಿಂದ ಪುತ್ತೂರಿಗೆ ಕರೆದುಕೊಂಡು ಹೋಗುವ ವೇಳೆ ಈ ಘಟನೆ ನಡೆದಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.