Home ಕರಾವಳಿ ಬಂಟ್ವಾಳ: ಸಿಡಿಲು ಬಡಿದು ಬಾಲಕ ಸಾವು

ಬಂಟ್ವಾಳ: ಸಿಡಿಲು ಬಡಿದು ಬಾಲಕ ಸಾವು

ಬಂಟ್ವಾಳ: ಬಾಲಕನೋರ್ವ ಸಿಡಿಲು ಬಡಿದು ಮೃತಪಟ್ಟ ಘಟನೆ ಕರಿಯಂಗಳ ಗ್ರಾಮದ ಸಾಣೂರು ಪದವಿನಲ್ಲಿ ನಿನ್ನೆ ರಾತ್ರಿ ನಡೆದಿದೆ.


ಸಾಣೂರುಪದವಿನ ಕಾರ್ತಿಕ್ (16) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.


ಸೋಮವಾರ ರಾತ್ರಿ 9.30ರ ಸುಮಾರಿಗೆ ಜೋರಾಗಿ ಸಿಡಿಲು ಸಹಿತ ಮಳೆ ಬಂದಿತ್ತು. ಮನೆಯಲ್ಲಿ ಮಲಗಿದ್ದ ಕಾರ್ತಿಕ್ ಕುಟುಂಬದವರಿಗೆ ಕರೆಂಟ್ ಶಾಕ್ ಹೊಡೆದ ಅನುಭವವಾಗಿದೆ. ಈ ವೇಳೆ ಕಾರ್ತಿಕ್ ಏಳದೆ ಇದ್ದಾಗ, ಆತನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Join Whatsapp
Exit mobile version