Home ಕರಾವಳಿ ಬಂಟ್ವಾಳ: ಅಪ್ರಾಪ್ತೆಯನ್ನು ಅತ್ಯಾಚಾರ ಎಸಗಿ ಆರೋಪಿ ವಿದೇಶಕ್ಕೆ ಪರಾರಿ: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಬಂಟ್ವಾಳ: ಅಪ್ರಾಪ್ತೆಯನ್ನು ಅತ್ಯಾಚಾರ ಎಸಗಿ ಆರೋಪಿ ವಿದೇಶಕ್ಕೆ ಪರಾರಿ: ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಬಂಟ್ವಾಳ: ಅಪ್ರಾಪ್ತೆಯನ್ನು ಅತ್ಯಾಚಾರ ಎಸಗಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆಮರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಬಾಲಕಿ ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿದ್ದು ಇದೀಗ ಆಕೆ ಮಗುವಿಗೆ ಜನ್ಮ ನೀಡಿದ್ದು ಬೆಳಕಿಗೆ ಬಂದಿದೆ.
ಸಂತ್ರಸ್ತೆ ಬಾಲಕಿಗೆ ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂ ನಲ್ಲಿ ಪರಿಚಯವಾಗಿದ್ದು ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿ ಆ ಬಳಿಕ ನಾಪತ್ತೆಯಾಗಿದ್ದಾನೆ.


ಇದೀಗ ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು ಆತನಿಗಾಗಿ ಶೋಧ ಮುಂದುವರಿಸಿದ್ದಾರೆ.

Join Whatsapp
Exit mobile version