Home ಟಾಪ್ ಸುದ್ದಿಗಳು ಬಂಟ್ವಾಳ: ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಆರೋಪ; 20 ಬೋಟ್ ಗಳು ವಶಕ್ಕೆ

ಬಂಟ್ವಾಳ: ನೇತ್ರಾವತಿ ನದಿ ತೀರದಲ್ಲಿ ಅಕ್ರಮ ಮರಳುಗಾರಿಕೆ ಆರೋಪ; 20 ಬೋಟ್ ಗಳು ವಶಕ್ಕೆ

ಬಂಟ್ವಾಳ: ನೇತ್ರಾವತಿ ನದಿ ತೀರದ ತುಂಬೆ, ಮಾರಿಪಳ್ಳ ಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳುಗಾರಿಕಾ ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ಬೊಟ್ ಗಳನ್ನು ಶುಕ್ರವಾರ ಮುಂಜಾನೆ ವಶಪಡಿಸಿಕೊಂಡಿದ್ದಾರೆ.


ದ.ಕ.ಜಿಲ್ಲಾಧಿಕಾರಿಯವರ ಆದೇಶದಂತೆ ಗಣಿ ಇಲಾಖೆ, ಬಂಟ್ವಾಳ ಕಂದಾಯ ಇಲಾಖೆಯು ಬಂಟ್ವಾಳ ಗ್ರಾಮಾಂತರ ಪೊಲೀಸರ ನೆರವು ಪಡೆದು ಕಾರ್ಯಚರಣೆ ನಡೆಸಿ ಸುಮಾರು 20 ಬೋಟ್ ಗಳನ್ನು ವಶಪಡಿಸಿಕೊಂಡು ಮಂಗಳೂರು ತಾಲೂಕಿನ ಅಡ್ಯಾರಿಗೆ ಸ್ಥಳಾಂತರಿಸಿದ್ದಾರೆ.


ವಶಪಡಿಸಿಕೊಂಡ ಯಾವುದೇ ಬೋಟ್ ಗಳಲ್ಲಿ ಮರಳು ಪತ್ತೆಯಾಗಿಲ್ಲ. ಜೊತೆಗೆ ದಾಳಿಯ ವೇಳೆ ಮರಳುಗಾರಿಕೆಯಲ್ಲಿ ತೊಡಗಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Join Whatsapp
Exit mobile version