ಬಂಟ್ವಾಳ: ಕೆಲಸ ಸಿಗದ ಖಿನ್ನತೆಯಿಂದ ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಸ್ಥಳೀಯ ಮುಸ್ಲಿಮ್ ಯುವಕರು ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಪುತ್ತೂರಿನ ನಿಶ್ಚಿತ್ (25) ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ಗುರುತಿಸಲಾಗಿದೆ. ಈತ ಎಂ ಎಸ್ ಡಬ್ಲ್ಯು ಪದವೀಧರ ಎಂದು ತಿಳಿದು ಬಂದಿದೆ.
ನಿಶ್ಚಿತ್ ರಸ್ತೆ ಬದಿ ವಾಹನ ನಿಲ್ಲಿಸಿ ನದಿಗೆ ಹಾರಲು ಯತ್ನಿಸಿದ್ದು, ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳಾದ ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯಿಂದ ಪಾರು ಮಾಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.