Home ಕರಾವಳಿ ಬಂಟ್ವಾಳ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ವ್ಯಕ್ತಿಯೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಕಾರಾಜೆ ನಿವಾಸಿ ಜಲೀಲ್ ( 55) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.  ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳೀಯ ಈಜುಗಾರರ ಸಹಾಯದಿಂದ ಇಂದು ಮುಂಜಾನೆ ಹುಡುಕಿದಾಗ ನದಿಯಲ್ಲಿ ಶವ ಪತ್ತೆಯಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version