ಮಂಗಳೂರು: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲೇ ಪಿಕಪ್ ಚಾಲನೆ

Prasthutha|

- Advertisement -

ಮಂಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕ ತಮ್ಮ ವಾಹನವನ್ನು ಚಲಾಯಿಸಿದ್ದಾನೆ. ಆದರೆ ನೀರು ಹೆಚ್ಚಾಗಿ ಸೇತುವೆಯ ಮಧ್ಯ ಭಾಗದಲ್ಲಿ ಸಿಲುಕಿಕೊಂಡಿದೆ. ತಕ್ಷಣ ಸ್ಥಳೀಯರು ಅದರೊಳಗಡೆ ಸಿಲುಕಿದವವರನ್ನು ರಕ್ಷಣೆ ಮಾಡಿದ್ದಾರೆ

ಈ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆದಿಲದಲ್ಲಿ ನಡೆದಿದೆ. ಕೆದಿಲ ಕಾಂತುಕೋಡಿ ಮುಳುಗು ಸೇತುವೆಯಲ್ಲಿ ಚಾಲಕ ಪಿಕಪ್ ಚಲಾಯಿಸಿ ನಡು ನೀರಿನಲ್ಲಿ ಸಿಲುಕಿಕೊಂಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ವಾಹನದಲ್ಲಿದ್ದವರ ರಕ್ಷಣೆ ಮಾಡಿದ್ದಾರೆ

- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳ ನದಿಗಳೆಲ್ಲ ತುಂಬಿ ಹರಿಯುತ್ತಿವೆ.

Join Whatsapp