Home ಕರಾವಳಿ ಬಂಟ್ವಾಳ: ಮೂರು ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ

ಬಂಟ್ವಾಳ: ಮೂರು ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ

ಬಂಟ್ವಾಳ: ಬರಿಮಾರು ಗ್ರಾಮದ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ ಘಟನೆ ವರದಿಯಾಗಿದೆ.


ಪದ್ಮನಾಭ ಪೂಜಾರಿ ಅವರ ಪತ್ನಿ ದೀಕ್ಷಿತಾ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದರು. ಬುಧವಾರ ಶಸ್ತ್ರಚಿಕಿತ್ಸೆ ನಡೆಸಿ ಮೂರು ಮಕ್ಕಳನ್ನು ಹೆರಿಗೆ ಮಾಡಿಸಿದ್ದು, ಒಂದು ಗಂಡು ಮತ್ತು ಎರಡು ಹೆಣ್ಣು ಮಗು ಜನಿಸಿದೆ.


ಮಕ್ಕಳು ತಾಯಿಯೊಂದಿಗೆ ತುರ್ತು ನಿಗಾ ಘಟಕದಲ್ಲಿ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.

Join Whatsapp
Exit mobile version