ಬಂಟ್ವಾಳ: ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು

Prasthutha|

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಮೃತಪಟ್ಟಿದ್ದಾರೆ.

- Advertisement -

ಬಿಸಿರೋಡಿನ ಕೈಕಂಬ ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಅಪಘಾತ ನಡೆದಿತ್ತು.

ಇಲ್ಲಿನ ಸ್ಥಳೀಯ ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ.

- Advertisement -

ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಯಲ್ಲಿ ಈಕೆ ಕೆಲಸಕ್ಕೆ ರಜೆ ಪಡೆದುಕೊಂಡು ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಳು ಈ ವೇಳೆ ಕಾರು ಡಿಕ್ಕಿ ಹೊಡೆದಿದೆ.

Join Whatsapp