ಬಂಟ್ವಾಳ: ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು

Prasthutha|

ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.

- Advertisement -


ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತಪಟ್ಟ ಯುವತಿಯಾಗಿದ್ದಾಳೆ.


ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಬಿಸಿರೋಡಿನಿಂದ ಬಸ್ ಮೂಲಕ ಊರಿಗೆ ಹೋಗಿದ್ದಳು. ಯುವತಿ ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು, ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.