ಬಂಟ್ವಾಳ: RSS ಪ್ರೇರಿತ NIA ದಾಳಿ ಖಂಡಿಸಿ ರಸ್ತೆ ತಡೆ ನಡೆಸಿದ PFI ಕಾರ್ಯಕರ್ತರು

Prasthutha|

ಬಂಟ್ವಾಳ: ರಾಜ್ಯಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಾಯಕರ ಮನೆ ಮತ್ತು ಕಚೇರಿಗೆ ಬಿಜೆಪಿ ಮತ್ತು RSS ಪ್ರೇರಿತ ಎನ್ ಐಎ ದಾಳಿ ನಡೆದಿದೆ ಎಂದು ಆರೋಪಿಸಿ ಬಿಸಿರೋಡಿನಲ್ಲಿ ಗುರುವಾರ ಕಾರ್ಯಕರ್ತರು ಮತ್ತು ಸಾರ್ವಜನಿಕರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.


ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಕಾರರನ್ನು ರಸ್ತೆ ಬದಿಗೆ ಚದುರಿಸಿದರು.
ಗುರುವಾರ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಎಸ್ ಡಿಪಿಐ ಕಚೇರಿ ಸೇರಿದಂತೆ ಪಿಎಫ್ಐ ಮುಖಂಡರ ಮನೆ ಮೇಲೆ ದಾಳಿ ನಡೆಸಿದ್ದರು. ಇದನ್ನು ಖಂಡಿಸಿ ಅಲ್ಲಲ್ಲಿ ಪ್ರತಿಭಟನೆ ನಡೆಸಲಾಗಿದೆ. ಬಿ.ಸಿ.ರೋಡಿನಲ್ಲಿ ಬೆಳಗ್ಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗಿದೆ.

- Advertisement -