ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾದ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ನಡೆದಿದೆ.
ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದು, ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಘಟನೆಯಿಂದ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಬಸ್ ತೆರವು ಮಾಡಲಾಗಿದೆ.