ಬಂಟ್ವಾಳ | ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ಆರೋಪ: ಇಬ್ಬರು ಪೊಲೀಸರ ವಶಕ್ಕೆ

Prasthutha|

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ನಿನ್ನೆ ಕಾರಿನಲ್ಲಿ ಬಂದ ಪರಿಚಿತ ವ್ಯಕ್ತಿ ಇನ್ನಿತರರು ತನ್ನನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿರುವ ಕುರಿತು ಬಾಲಕಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅಪಹರಣ, ಅತ್ಯಾಚಾರ, ಬೆದರಿಕೆ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ದೂರಿನ ಆಧಾರದ ಮೇಲೆ ಐವರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಇತರೆ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. 

Join Whatsapp