ಬಂಟ್ವಾಳ | ಸಾವದ್ ಕೊಲೆ ಪ್ರಕರಣ: ಇಬ್ಬರ ಬಂಧನ

Prasthutha|

- Advertisement -

ಬಂಟ್ವಾಳ: ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಯುವಕನೊರ್ವನ ಶವ ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತನಿಖೆ ನಡೆಸಿದ ಪೊಲೀಸರು ಗುರುವಾಯನಕೆರೆಯಲ್ಲಿ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಿದ್ದಾರೆ.

- Advertisement -

ದೇವರಮನೆಯಲ್ಲಿ ಜೂನ್ 8 ರಂದು ಕೊಳೆತ ಸ್ಥಿತಿಯಲ್ಲಿ ಅಪರಚಿತ ಶವವೊಂದು ಪತ್ತೆ ಆಗಿತ್ತು. ಅಂದು ಬಣಕಲ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ಬಂಧಿಸಿ ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ.