Home ಟಾಪ್ ಸುದ್ದಿಗಳು ಬಂಟ್ವಾಳ ಸಾವದ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ ಸಾವದ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ: ಸಾವದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ದಾವೂದ್ ಅಮೀರ್, ಅಬ್ದುಲ್ ರಹೀಜ್, ಬಂಟ್ವಾಳದ ಕಾವಲ ಮೂಡೂರು ಗ್ರಾಮದ ಆಫ್ರಿದಿ, ಮಹಮ್ಮದ್ ಇರ್ಷಾದ್ ಎಂದು ಗುರುತಿಸಲಾಗಿದೆ.


ಈಗಾಗಲೇ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿದ್ದ ನಾಲ್ವರನ್ನು ಭಾನುವಾರ ಬಂಧಿಸಲಾಗಿದೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿದಂತಾಗಿದೆ.


ದೇವರಮನೆಯಲ್ಲಿ ಜೂನ್ 8 ರಂದು ಕೊಳೆತ ಸ್ಥಿತಿಯಲ್ಲಿ ಅಪರಚಿತ ಶವವೊಂದು ಪತ್ತೆ ಆಗಿತ್ತು. ಅಂದು ಬಣಕಲ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Join Whatsapp
Exit mobile version