ಬಂಟ್ವಾಳ: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ ಎಲ್ಲೆಡೆ ಮುಂಜಾನೆಯಿಂದಲೇ ಬಿರುಸಿನ ಮತದಾನ ಪ್ರಕ್ರಿಯೆ ನಡೆದಿದೆ.
ಮತದಾನ ಪ್ರಭುಗಳು ಆಯಾ ಮತಕ್ಷೇತ್ರಕ್ಕೆ ಬಂದು ತಮ್ಮ ಮತವನ್ನು ಚಲಾಯಿಸಿದ್ದಾರೆ. ಹಿರಿಯ ನಾಗರಿಕರು ತಮ್ಮ ಮಕ್ಕಳು, ಮೊಮ್ಮಕ್ಕಳೊಂದಿಗೆ ಬಂದು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರದ SDPI ಅಭ್ಯರ್ಥಿ ಇಲ್ಯಾಸ್ ತುಂಬೆ ಅವರು ತುಂಬೆಯ ಬಿ.ಎ.ಪದವಿ ಪೂರ್ವ ಕಾಲೇಜಿನಲ್ಲಿ ಮತದಾನಗೈದರು.