ಬಂಟ್ವಾಳ: ಎಸ್ ಡಿ ಪಿ ಐ ವತಿಯಿಂದ ಚುನಾವಣಾ ಪೂರ್ವ ಕಾರ್ಯಕರ್ತರ ಸಭೆ

Prasthutha|

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ‘ಪೋಲ್ ನೆಕ್ಸ್ಟ್ ‘ ಎಂಬ ಶೀರ್ಷಿಕೆಯಲ್ಲಿ ಚುನಾವಣಾ ಪೂರ್ವ ಕಾರ್ಯಕರ್ತರ ಸಭೆಯು ಇಂದು ಬಿ.ಸಿ ರೋಡಿನ ಅಲ್ ಖಝಾನ ಸಭಾಂಗಣದಲ್ಲಿ ಜರುಗಿತು.

- Advertisement -

ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಅನ್ವರ್ ಬಡಕಬೈಲ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿಯನ್ನು ತೋರ್ಪಡಿಸಬೇಕಾಗಿದೆ. ಅನ್ಯಾಯ, ಅನೀತಿಗಳ ವಿರುದ್ಧ ವಿಧಾನ ಸೌಧದಲ್ಲಿ ಧ್ವನಿಯೆತ್ತಲು ಎಸ್ ಡಿ ಪಿ ಐ ಅಭ್ಯರ್ಥಿಗಳಿಗೆ ಜನರು ಒಂದು ಅವಕಾಶವನ್ನು ಕಲ್ಪಿಸಿಕೊಡಬೇಕು. ಖಂಡಿತವಾಗಿಯೂ ಅರಾಜಕತೆಯಿಂದ ಕೂಡಿರುವ ಆಡಳಿತ ವ್ಯವಸ್ಥೆಯನ್ನು ಸರಿದಾರಿಗೆ ತರುವ ಸತತ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ಪಕ್ಷದ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಪ್ರಸಕ್ತತೆಯಲ್ಲಿ ಪಕ್ಷದ ಮಹತ್ವ ಮತ್ತು ಅನಿವಾರ್ಯತೆಯ ಬಗ್ಗೆ ಅರಿವು ಮೂಡಿಸಿದರು. ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

- Advertisement -

ಎಸ್ ಡಿ ಪಿ ಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಮಾತನಾಡಿ ‘ಎಸ್ ಡಿ ಪಿ ಐ ನಾಯಕರನ್ನು ಗುರಿ ಮಾಡಿ ಅಕ್ರಮವಾಗಿ ಬಂಧನಕ್ಕೊಳಪಡಿಸಲು ಮತ್ತು ಅನ್ಯಾಯವಾಗಿ ನಮ್ಮ 14 ಕಛೇರಿಗಳನ್ನು ಸೀಲ್ ಮಾಡಲು ಯಾರೆಲ್ಲಾ ಅಧಿಕಾರಿಗಳು ಕಾರಣಕರ್ತರಾಗಿದ್ದಾರೆ ಅವರೆಲ್ಲರನ್ನೂ ಕಾನೂನಿನ ಕುಣಿಕೆಗೊಳಪಡಿಸಿಯೇ ತೀರುತ್ತೇವೆ ಎಂದು ಸಮಾರೋಪ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ, ಅಬೂಬಕರ್ ಮದ್ದ, ಖಾದರ್ ಅಮ್ಮೆಮ್ಮಾರ್, ಎಸ್ ಡಿ ಪಿ ಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಶರೀಫ್ ವಳವೂರು ಹಾಗೂ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಕಲಂದರ್ ಪರ್ತಿಪಾಡಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರೆ, ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ ನಿರೂಪಿಸಿ ಧನ್ಯವಾದಗೈದರು.

Join Whatsapp